1 ಕೊರಿಂಥದವರಿಗೆ 1
  • 1 ¶ ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯ ಲ್ಪಟ್ಟ ಪೌಲನೂ ನಮ್ಮ ಸಹೋದರನಾದ ಸೊಸ್ಥೆ ನನೂ
  • 2 ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
  • 3 ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.
  • 4 ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.
  • 5 ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
  • 6 ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.
  • 7 ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.
  • 8 ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
  • 9 ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
  • 10 ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
  • 11 ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು.
  • 12 ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
  • 13 ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
  • 14 ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
  • 15 ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು.
  • 16 ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.
  • 17 ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
  • 18 ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
  • 19 ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.
  • 20 ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
  • 21 ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
  • 22 ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
  • 23 ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
  • 24 ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
  • 25 ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.
  • 26 ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
  • 27 ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
  • 28 ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
  • 29 ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
  • 30 ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.
  • 31 ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.