1 ಥೆಸಲೋನಿಕದವರಿಗೆ 5
  • 1 ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ.
  • 2 ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
  • 3 ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
  • 4 ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
  • 5 ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
  • 6 ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
  • 7 ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
  • 8 ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
  • 9 ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
  • 10 ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
  • 11 ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
  • 12 ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
  • 13 ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
  • 14 ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
  • 15 ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
  • 16 ಯಾವಾಗಲೂ ಸಂತೋಷಿಸಿರಿ;
  • 17 ಎಡೆಬಿಡದೆ ಪ್ರಾರ್ಥನೆ ಮಾಡಿರಿ.
  • 18 ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
  • 19 ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ;
  • 20 ಪ್ರವಾದನೆಗಳನ್ನು ಹೀನೈಸಬೇಡಿರಿ;
  • 21 ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
  • 22 ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
  • 23 ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
  • 24 ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
  • 25 ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
  • 26 ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
  • 27 ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.
  • 28 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.