ವಿಮೋಚನಕಾಂಡ 21
  • 1 ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.
  • 2 ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.
  • 3 ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
  • 4 ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.
  • 5 ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ
  • 6 ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
  • 7 ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು.
  • 8 ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ.
  • 9 ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯಮಾಡಿದರೆ ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು.
  • 10 ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು.
  • 11 ಈ ಮೂರನ್ನು ಅವಳಿಗೆ ಮಾಡದೆ ಹೋದರೆ ಅವಳು ಹಣಕೊಡದೆ ಸ್ವತಂತ್ರ ಳಾಗಿ ಹೋಗಬಹುದು.
  • 12 ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.
  • 13 ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
  • 14 ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
  • 15 ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು.
  • 16 ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
  • 17 ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
  • 18 ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ
  • 19 ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು.
  • 20 ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.
  • 21 ಆದರೂ ಅವನು ಒಂದೆರೆಡು ದಿನಗಳು ಉಳಿದರೆ ಶಿಕ್ಷೆಯಾಗಬಾರದು. ಅವನು ಅವನ ಸೊತ್ತು.
  • 22 ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.
  • 23 ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ
  • 24 ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂ
  • 25 ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.
  • 26 ಇದಲ್ಲದೆ ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೋಸ್ಕರ ಅವನನ್ನು ಬಿಡುಗಡೆಮಾಡಿ ಅವನು ಕಳುಹಿಸಲಿ.
  • 27 ಒಬ್ಬನು ದಾಸನ ಹಲ್ಲನ್ನು ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೋಸ್ಕರ ಅವನನ್ನು ಬಿಡುಗಡೆಮಾಡಿ ಕಳುಹಿಸಲಿ.
  • 28 ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
  • 29 ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
  • 30 ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.
  • 31 ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
  • 32 ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್‌ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
  • 33 ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ
  • 34 ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
  • 35 ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.
  • 36 ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.