ಆದಿಕಾಂಡ 10
  • 1 ನೋಹನ ಕುಮಾರರಾದ ಶೇಮ್‌ ಹಾಮ್‌ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
  • 2 ಯೆಫೆತನ ಕುಮಾರರು ಯಾರಂದರೆ, ಗೋಮೆರ್‌ ಮಾಗೋಗ್‌ ಮಾದಯ್‌ ಯಾವಾನ್‌ ತೂಬಲ್‌ ಮೇಷೆಕ್‌ ತೀರಾಸ್‌ ಎಂಬವರು.
  • 3 ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್‌ ರೀಫತ್‌ ತೋಗರ್ಮ ಎಂಬವರು.
  • 4 ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್‌ ಕಿತ್ತೀಮ್‌ ದೋದಾನಿಮ್‌ ಇವರೇ.
  • 5 ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
  • 6 ಹಾಮನ ಕುಮಾರರು ಯಾರಂದರೆ, ಕೂಷ್‌ ಮಿಚ್ರಯಿಮ್‌ ಪೂತ್‌ ಕಾನಾನ್‌ ಎಂಬವರು.
  • 7 ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್‌ ಎಂಬವರು.
  • 8 ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.
  • 9 ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
  • 10 ಶಿನಾರ್‌ ದೇಶದಲ್ಲಿರುವ ಬಾಬೆಲ್‌ ಯೆರೆಕ್‌ ಅಕ್ಕದ್‌ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
  • 11 ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್‌ ಎಂಬ ಪಟ್ಟಣ, ಕೆಲಹ,
  • 12 ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್‌ನನ್ನು ಕಟ್ಟಿದನು.
  • 13 ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ
  • 14 ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
  • 15 ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
  • 16 ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
  • 17 ಹಿವ್ವಿಯನೂ ಅರ್ಕಿಯನೂ ಸೀನಿಯನೂ
  • 18 ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್‌ ಕುಟುಂಬಗಳು ವಿಸ್ತಾರವಾಗಿ ಹರಡಿದವು.
  • 19 ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್‌ ಗೊಮೋರ ಅದ್ಮಾ ಚೆಬೋಯಿಮ್‌ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
  • 20 ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
  • 21 ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
  • 22 ಶೇಮನ ಮಕ್ಕಳು ಯಾರಂದರೆ, ಏಲಾಮ್‌ ಅಶ್ಶೂರ್‌ ಅರ್ಪಕ್ಷದ್‌ ಲೂದ್‌ ಅರಾಮ್‌.
  • 23 ಅರಾಮನ ಮಕ್ಕಳು ಯಾರಂದರೆ, ಊಸ್‌ ಹೂಲ್‌ ಗೆತೆರ್‌ ಮಷ್‌ ಇವರೇ.
  • 24 ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು.
  • 25 ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್‌.
  • 26 ಯೊಕ್ತಾನನಿಂದ ಅಲ್ಮೋದಾದನೂ ಶೆಲೆಪನೂ ಹಚರ್ಮಾವೆತನೂ ಯೆರಹನೂ
  • 27 ಹದೋರಾಮನೂ ಊಜಾಲನೂ ದಿಕ್ಲಾನನೂ
  • 28 ಓಬಾಲನೂ ಅಬೀಮಯೇಲನೂ ಶೆಬನೂ
  • 29 ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.
  • 30 ಅವರ ನಿವಾಸವು ಮೇಶಾದಿಂದ ಪೂರ್ವದಿಕ್ಕಿನ ಬೆಟ್ಟವಾಗಿರುವ ಸೆಫಾರಿನ ವರೆಗೆ ಇತ್ತು.
  • 31 ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.
  • 32 ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.