ಯೆರೆಮೀಯ 48
  • 1 ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್‌ ನಾಚಿಕೆಹೊಂದಿ ಹೆದರಿಕೊಂಡಿತು.
  • 2 ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು.
  • 3 ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.
  • 4 ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
  • 5 ಲೂಹೀತ್‌ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
  • 6 ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
  • 7 ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
  • 8 ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು.
  • 9 ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ.
  • 10 ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.
  • 11 ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.
  • 12 ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು.
  • 13 ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ ಹಾಗೆಯೇ ಮೋವಾಬು ಕೇಮೋ ಷನ ವಿಷಯ ನಾಚಿಕೆಪಡುವದು.
  • 14 ನಾವು ಪರಾಕ್ರಮ ಶಾಲಿಗಳೂ ಯುದ್ಧಕ್ಕೆ ಬಲಿಷ್ಠರೂ ಎಂದು ನೀವು ಹೇಳುವದು ಹೇಗೆ?
  • 15 ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
  • 16 ಮೋವಾಬಿನ ಆಪತ್ತು ಬರುವದಕ್ಕೆ ಸವಿಾಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ.
  • 17 ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.
  • 18 ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
  • 19 ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.
  • 20 ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
  • 21 ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್‌ನ ಮೇಲೆಯೂ
  • 22 ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್‌ದಿಬ್ಲಾತಯಿಮ್‌ನ ಮೇಲೆಯೂ
  • 23 ಕಿರ್ಯಾತಯಾಮಿನ ಮೇಲೆಯೂ ಬೇತ್‌ಗಾಮುಲಿನ ಮೇಲೆಯೂ ಬೇತ್‌ಮೆಯೋನಿನ ಮೇಲೆಯೂ
  • 24 ಕೆರೀಯೋತ್‌ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.
  • 25 ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.
  • 26 ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.
  • 27 ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ನೀನು ಅವರ ವಿಷಯ ಯಾವಾಗ ಮಾತನಾಡಿದಂದಿನಿಂದ ಸಂತೋಷಕ್ಕಾಗಿ ತಲೆ ಅಲ್ಲಾಡಿಸಿದಿಯಲ್ಲಾ.
  • 28 ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
  • 29 ಮೋವಾ ಬಿನ ಹೆಮ್ಮೆಯನ್ನು ಕುರಿತು ಅದರ ಮಹಾಗರ್ವವನ್ನ್ನೂ ಡಂಬವನ್ನೂ ಅಹಂಕಾರವನ್ನೂ ಬಡಾಯಿಯನ್ನೂ ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ.
  • 30 ನಾನು ಅದರ ಕೋಪೋ ದ್ರೇಕವನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಆದರೆ ಅದು ಹಾಗೆ ಆಗುವದಿಲ್ಲ; ಅವನ ಸುಳ್ಳುಗಳು ಸರಿ ಬೀಳುವದಿಲ್ಲ.
  • 31 ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್‌ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು.
  • 32 ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.
  • 33 ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.
  • 34 ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್‌ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್‌ನ ನೀರುಗಳು ಸಹ ಹಾಳಾದವು.
  • 35 ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ.
  • 36 ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್‌ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
  • 37 ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
  • 38 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
  • 39 ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
  • 40 ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವನು ಹದ್ದಿನ ಹಾಗೆ ಹಾರಿ ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವೆನು.
  • 41 ಕೆರೀಯೋತ್‌ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
  • 42 ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು.
  • 43 ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ.
  • 44 ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
  • 45 ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
  • 46 ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.
  • 47 ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.