ಯೊಹೋಶುವ 13
  • 1 ಯೆಹೋಶುವನು ದಿನ ತುಂಬಿದ ಮುದುಕ ನಾಗಲು ಕರ್ತನು ಅವನಿಗೆ--ನೀನು ಮುದುಕನಾಗಿ ದಿನಗಳು ಹೋದವನಾದಿ; ಆದರೆ ಸ್ವಾಧೀನಮಾಡಿಕೊಳ್ಳತಕ್ಕ ಸೀಮೆಯು ಇನ್ನು ಬಹಳ ವಾಗಿ ಇರುತ್ತದೆ.
  • 2 ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ,
  • 3 ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
  • 4 ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;
  • 5 ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್‌ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
  • 6 ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್‌ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.
  • 7 ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು.
  • 8 ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:
  • 9 ಅರ್ನೋನ್‌ ನದೀ ತೀರದಲ್ಲಿರುವ ಅರೋಯೇರ್‌ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
  • 10 ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ
  • 11 ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್‌ ಪರ್ವತವೆಲ್ಲವೂ
  • 12 ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.
  • 13 ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.
  • 14 ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
  • 15 ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.
  • 16 ಅರ್ನೋನ್‌ ನದಿಯ ತೀರದ ಲ್ಲಿರುವ ಅರೋಯೇರ್‌ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
  • 17 ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್‌ಬಾಳ್‌, ಬೆತ್ಬಾಳ್ಮೆಯೋನ್‌,
  • 18 ಯಹಚಾ ಕೆದೇಮೋತ್‌, ಮೇಫಾಯತ್‌,
  • 19 ಕಿರ್ಯಾತಯಿಮ್‌, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್‌ಶಹರ್‌,
  • 20 ಬೇತ್ಪಗೋರ್‌, ಅಷ್ಡೊತ್ಪಿಸ್ಗಾ, ಬೇತ್‌ಯೆಶಿಮೋತ್‌,
  • 21 ಹರ್‌, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ ಎಂಬವರನ್ನೂ ಕೊಂದುಹಾಕಿದನು.
  • 22 ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
  • 23 ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ.
  • 24 ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು.
  • 25 ಯಗ್ಜೇರ್‌; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು;
  • 26 ಹೆಷ್ಬೋನಿನಿಂದ ರಾಮತ್‌ಮಿಚ್ಪೆ, ಬೆಟೊನೀಮ್‌ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್‌ ಮೇರೆಯ ವರೆಗೂ ಇರುವ ದೇಶವು;
  • 27 ತಗ್ಗಿನಲ್ಲಿರುವ ಬೇತ್‌ಹಾರಾಮ್‌; ಬೇತ್‌ನಿಮ್ರಾ, ಸುಕ್ಕೋತ್‌, ಚಾಫೋನ್‌; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್‌ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
  • 28 ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ.
  • 29 ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು.
  • 30 ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.
  • 31 ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್‌, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.
  • 32 ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.
  • 33 ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್‌ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.