ಯಾಜಕಕಾಂಡ 9
  • 1 ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;
  • 2 ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
  • 3 ನೀನು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
  • 4 ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು.
  • 5 ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.
  • 6 ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.
  • 7 ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
  • 8 ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.
  • 9 ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
  • 10 ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು.
  • 11 ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
  • 12 ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
  • 13 ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು.
  • 14 ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು.
  • 15 ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು.
  • 16 ಅವನು ದಹನಬಲಿ ಯನ್ನು ತಂದು ಕ್ರಮದ ಪ್ರಕಾರವೇ ಅದನ್ನು ಸಮರ್ಪಿಸಿದನು.
  • 17 ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು.
  • 18 ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
  • 19 ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ
  • 20 ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು.
  • 21 ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
  • 22 ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
  • 23 ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.
  • 24 ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.