ಲೂಕ 15
  • 2 ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
  • 3 ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
  • 4 ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
  • 5 ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.
  • 6 ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
  • 7 ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
  • 8 ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ?
  • 9 ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
  • 10 ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
  • 11 ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.
  • 12 ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.
  • 13 ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
  • 14 ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
  • 15 ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ
  • 16 ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ.
  • 17 ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
  • 18 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
  • 19 ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
  • 20 ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
  • 21 ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
  • 22 ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
  • 23 ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
  • 24 ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
  • 25 ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು.
  • 26 ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು.
  • 27 ಆ ಸೇವಕನು ಅವನಿಗೆ--ನಿನ್ನ ತಮ್ಮನು ಬಂದಿದ್ದಾನೆ; ನಿನ್ನ ತಂದೆಯು ಅವನನ್ನು ಸುರಕ್ಷಿತವಾಗಿ ಸೌಖ್ಯದಲ್ಲಿ ಸ್ವೀಕರಿಸಿದ್ದರಿಂದ ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ ಅಂದನು.
  • 28 ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು.
  • 29 ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
  • 30 ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
  • 31 ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.
  • 32 ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.