ಮತ್ತಾಯ 4
  • 1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡು
  • 2 ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
  • 3 ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
  • 4 ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
  • 5 ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
  • 6 ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
  • 7 ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
  • 8 ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
  • 9 ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
  • 10 ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
  • 11 ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
  • 12 ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
  • 13 ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್‌, ನೆಫ್ತಲೀಮ್‌ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
  • 14 ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--
  • 15 ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್‌ ಪ್ರಾಂತ್ಯದಲ್ಲಿಯೂ ನೆಫ್ತಲೀಮ್‌ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ
  • 16 ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
  • 17 ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
  • 18 ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
  • 19 ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
  • 20 ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
  • 21 ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
  • 22 ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
  • 23 ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
  • 24 ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.
  • 25 ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.