ಅರಣ್ಯಕಾಂಡ 7
ಕನ್ನಡ ಪವಿತ್ರ ಬೈಬಲ್ · 89 verses
- 1 ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
- 2 ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.
- 3 ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.
- 4 ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ
- 5 ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು.
- 6 ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು.
- 7 ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು.
- 8 ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.
- 9 ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
- 10 ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.
- 11 ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.
- 12 ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
- 13 ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 14 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 15 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 16 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 17 ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು.
- 18 ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು.
- 19 ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 20 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 21 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 22 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ
- 23 ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು.
- 24 ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ--
- 25 ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 26 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 27 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 28 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 29 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು.
- 30 ನಾಲ್ಕನೇ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾ ನನಾಗಿರುವ ಶೆದೇಯೂರನ ಮಗನಾದ ಎಲೀಚೂ ರನು ಅರ್ಪಿಸಿದನು.
- 31 ಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 32 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.
- 33 ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 34 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 35 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು.
- 36 ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು.
- 37 ಅವನ ಅರ್ಪ ಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 38 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 39 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 40 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 41 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು.
- 42 ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು.
- 43 ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 44 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 45 ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 46 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 47 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು.
- 48 ಏಳನೇ ದಿನದಲ್ಲಿ ಎಫ್ರಾಯಾಮ್ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು.
- 49 ಅವನ ಅರ್ಪಣೆ ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 50 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.
- 51 ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 52 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 53 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಹೂದನ ಮಗನಾದ ಎಲೀಷಾಮನ ಅರ್ಪಣೆಯು.
- 54 ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್ ಅರ್ಪಿಸಿದನು.
- 55 ಅವನ ಅರ್ಪಣೆಯು ಏನಂದರೆ,--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 56 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 57 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 58 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 59 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು.
- 60 ಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು.
- 61 ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
- 62 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 63 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 64 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 65 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು.
- 66 ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು.
- 67 ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
- 68 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 69 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 70 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 71 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು.
- 72 ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು.
- 73 ಅವನ ಆರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
- 74 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 75 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 76 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 77 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು.
- 78 ಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು.
- 79 ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 80 ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 81 ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 82 ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 83 ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು.
- 84 ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.
- 85 ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.
- 86 ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್;
- 87 ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು,
- 88 ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.
- 89 ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.