ಜ್ಞಾನೋಕ್ತಿಗಳು 20
  • 1 ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
  • 2 ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
  • 3 ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
  • 4 ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.
  • 5 ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು.
  • 6 ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
  • 7 ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
  • 8 ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
  • 9 ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
  • 10 ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
  • 11 ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.
  • 12 ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.
  • 13 ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.
  • 14 ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.
  • 15 ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
  • 16 ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
  • 17 ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.
  • 18 ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
  • 19 ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
  • 20 ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
  • 21 ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
  • 22 ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
  • 23 ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.
  • 24 ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?
  • 25 ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
  • 26 ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
  • 27 ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.
  • 28 ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
  • 29 ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.
  • 30 ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.