ಜ್ಞಾನೋಕ್ತಿಗಳು 25
  • 1 ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಸಾಮತಿಗಳೇ.
  • 2 ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.
  • 3 ಆಕಾ ಶವು, ಉನ್ನತ ಭೂಮಿಯು ಅಗಾಧ ಮತ್ತು ಅರಸರ ಹೃದಯವು ಅಗೋಚರ.
  • 4 ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು.
  • 5 ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
  • 6 ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ;
  • 7 ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು.
  • 8 ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
  • 9 ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;
  • 10 ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು, ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.
  • 11 ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
  • 12 ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
  • 13 ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
  • 14 ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
  • 15 ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.
  • 16 ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟು ತಿನ್ನು; ಹೊಟ್ಟೆತುಂಬ ತಿಂದರೆ ಕಾರ ಬೇಕಾದೀತು.
  • 17 ನೆರೆಯವನು ಬೇಸರಗೊಂಡು ಹಗೆ ಮಾಡದ ಹಾಗೆ ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.
  • 18 ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
  • 19 ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
  • 20 ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.
  • 21 ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
  • 22 ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.
  • 23 ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
  • 24 ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು.
  • 25 ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
  • 26 ದುಷ್ಟರ ಮುಂದೆ ನೀತಿವಂತನು ಬೀಳುವದು, ಕದಲಿ ಸಲ್ಪಟ್ಟ ಬುಗ್ಗೆ, ಕೊಳಕಾದ ಒರತೆ ಇದ್ದಂತೆ.
  • 27 ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ.
  • 28 ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.