ಜ್ಞಾನೋಕ್ತಿಗಳು 7
  • 1 ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
  • 2 ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.
  • 3 ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.
  • 4 ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;
  • 5 ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
  • 6 ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ
  • 7 ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.
  • 8 ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ
  • 9 ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು.
  • 10 ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.
  • 11 (ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ.
  • 12 ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).
  • 13 ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು
  • 14 ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ.
  • 15 ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ.
  • 16 ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.
  • 17 ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.
  • 18 ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ.
  • 19 ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ.
  • 20 ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು
  • 21 ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
  • 22 ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ
  • 23 ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
  • 24 ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
  • 25 ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.
  • 26 ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.
  • 27 ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.