ಕೀರ್ತನೆಗಳು 33
  • 1 ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
  • 2 ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
  • 3 ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ.
  • 4 ಕರ್ತನ ವಾಕ್ಯವು ಯಥಾರ್ಥವಾದದ್ದು. ಆತನ ಕೆಲಸಗಳೆಲ್ಲಾ ಸತ್ಯದಲ್ಲಿ ಮಾಡಲ್ಪಟ್ಟಿವೆ.
  • 5 ಆತನು ನೀತಿ ನ್ಯಾಯಗಳನ್ನು ಪ್ರೀತಿಮಾಡುತ್ತಾನೆ; ಭೂಮಿ ಎಲ್ಲಾ ಕರ್ತನ ಒಳ್ಳೇತನದಿಂದ ತುಂಬಿದೆ.
  • 6 ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
  • 7 ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
  • 8 ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ.
  • 9 ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
  • 10 ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
  • 11 ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
  • 12 ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
  • 13 ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
  • 14 ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
  • 15 ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
  • 16 ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
  • 17 ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
  • 18 ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
  • 19 ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.
  • 20 ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ.
  • 21 ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.
  • 22 ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.